ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಎತ್ತಿಹಿಡಿದ ಸುಪ್ರೀಂ…

71
firstsuddi

ನವದೆಹಲಿ : ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಇಂದು ಈ ಬಗ್ಗೆ ತೀರ್ಪು ನೀಡಿದ ಮುಖ್ಯ ನ್ಯಾ. ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಾಮೂರ್ತಿಗಳ ಸಾಂವಿಧಾನಿಕ ಪೀಠ ಈ ಆದೇಶ ನೀಡಿದೆ.

ನ್ಯಾಯಮೂರ್ತಿ ದೀನೇಶ್ ಮಹೇಶ್ವರಿ, ನ್ಯಾ. ಬೇಲಾ ತ್ರಿವೇದಿ, ನ್ಯಾ ಜೆ.ಬಿ ಪರ್ದಿವಾಲಾ ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್) ಪರವಾಗಿ ಆದೇಶ ನೀಡಿದರೇ, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾ ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

103ನೇ ಸಾಂವಿಧಾನಿಕ ತಿದ್ದುಪಡಿಯನ್ನು ಎತ್ತಿಹಿಡಿದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ, ಏಕೆಂದರೆ ಇದು ಆರ್ಥಿಕ ಮಾನದಂಡಗಳನ್ನು ಆಧರಿಸಿದೆ, ಇಡಬ್ಲ್ಯೂಎಸ್ ಕೋಟಾಕ್ಕೆ ವಿಶೇಷ ನಿಬಂಧನೆಯನ್ನು ರೂಪಿಸುವ ರಾಜ್ಯವು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದರು. ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಪ್ರತ್ಯೇಕ ತೀರ್ಪಿನ ಮೂಲಕ ನ್ಯಾಯಮೂರ್ತಿ ಮಹೇಶ್ವರಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ದೃಷ್ಟಿಯಿಂದ ಇಡಬ್ಲ್ಯೂಎಸ್ ಕೋಟಾಕ್ಕೆ ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅಸಮ್ಮತಿ ವ್ಯಕ್ತಪಡಿಸಿದ್ದರು. ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ, ಆದಾಗ್ಯೂ Sಅ, Sಖಿ, ಔಃಅ ಯಂತಹ ವರ್ಗಗಳನ್ನು ಹೊರತುಪಡಿಸಿ ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ ಎಂದರು. ನ್ಯಾಯಮೂರ್ತಿ ಭಟ್ ಅವರ ಅಭಿಪ್ರಾಯಕ್ಕೆ ಸಿಜೆಐ ಲಲಿತ್ ಸಹಮತ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು 2019ರಲ್ಲಿ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿತ್ತು. ಆದರೆ ಕೇಂದ್ರ ಸರ್ಕಾರದ ಈ ನಿಲುವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು.