ಆ್ಯಸಿಡ್ ದಾಳಿಗೊಳಗಾದ ಯುವತಿಯ ನೈಜ ಕಥೆಯಾಧಾರಿತ “ಚಾಪಕ್” ಚಿತ್ರದ ಟ್ರೈಲರ್ ಬಿಡುಗಡೆ

343

ನವದೆಹಲಿ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ನಟಿಸಿರುವ “ಚಾಪಕ್” ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ. ದೀಪಿಕಾ ಪಡುಕೋಣೆ ಅವರು 2005ರಲ್ಲಿ ದೆಹಲಿಯಲ್ಲಿ ಆ್ಯಸಿಡ್ ದಾಳಿಗೊಳಗಾದ ಲಕ್ಷ್ಮಿ ಅಗರ್‍ವಾಲ್ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಆ್ಯಸಿಡ್ ದಾಳಿಯಾದ ಬಳಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ ಲಕ್ಷ್ಮಿ ಅವರ ಜೀವನವನ್ನೇ ಆಧಾರವಾಗಿಸಿಕೊಂಡು ಚಾಪಕ್ ಸಿನಿಮಾವನ್ನು ಮಾಡಲಾಗುತ್ತಿದೆ. ಚಾಪಕ್ ಚಿತ್ರವನ್ನು ಮೇಘನಾ ಗುಲ್ಜಾರ್ ಅವರು ನಿರ್ದೇಶಿಸಿದ್ದು, ಫಾಕ್ಸ್ ಸ್ಟಾರ್ ಸ್ಟಡಿಯೋಸ್ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಹಾಗೂ ವಿಕ್ರಾಂತ್ ಮೆಸ್ಸೆ ಸೇರಿದಂತೆ ಹಲವರು ನಟಿಸಿದ್ದಾರೆ.