ಬೆಂಗಳೂರು : ಕೋವಿಡ್ ಎರಡನೇ ಅಲೆಯ ಮಧ್ಯೆಯೂ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕಾಗಿ ಇಂದಿನಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಬಿ-ಫಾರ್ಮ ಹಾಗೂ 2 ನೇ ವರ್ಷದ ಬಿ ಫಾರ್ಮ ಮತ್ತು ಡಿ ಫಾರ್ಮ್, ಕೃಷಿ ವಿಜ್ಞಾನ ಕೋರ್ಸ್ ಗಳು ಮತ್ತು ವೆಟರ್ನರಿ ಕೋರ್ಸ್ ಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟ ಮಾಡಿದೆ.ಹೀಗಾಗಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ)ವೇಳಾಪಟ್ಟಿ ಹೀಗಿದೆ.
• ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ
• ಆನ್ ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನ- ಜುಲೈ 13
• ವಿಶೇಷ ಪ್ರವರ್ಗಗಳ ಮೂಲ ಪ್ರಮಾಣ ಪತ್ರಗಳ ಸಲ್ಲಿಕೆ- ಜುಲೈ 14 ರಿಂದ ಜುಲೈ 20ರವರೆಗೆ
• ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯಲ್ಲಿನ ಮಾಹಿತಿಗಳ ತಿದ್ದುಪಡಿ – ಜುಲೈ 19 ರಿಂದ 22 ರವರೆಗೆ
• ಸಿಇಟಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಆಗಸ್ಟ್ 13 ರಂದು










