ಇಂದಿನಿಂದ ಸಿಇಟಿ ಪರೀಕ್ಷೆ – ಹಿಜಾಬ್‍ಗಿಲ್ಲ ಅವಕಾಶ…

62
firstsuddi

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.

486 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರ, ಇತರೆ ಜಿಲ್ಲೆಗಳಲ್ಲಿ 399 ಕೇಂದ್ರಗಳ ನಿಗದಿಯಾಗಿದೆ. ಕಳೆದ ವರ್ಷಕ್ಕಿಂದ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟಾರೆ 20,483 ಸಿಬ್ಬಂದಿಗಳು ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.

2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಪರೀಕ್ಷೆಗೆ ಬರುವಂತಿಲ್ಲ ಎಂದು ತಿಳಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ನಿಷೇಧಿಸಲಾಗಿದ್ದು, ಜೊತೆಗೆ ಆಭರಣಗಳು ಧರಿಸುವಂತಿಲ್ಲ, ಮೊಬೈಲ್, ಬ್ಲೂ ಟೂತ್, ಕೈ ಗಡಿಯಾರ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ ವಿಧಿಸಲಾಗಿದ್ದು, ಕೋವಿಡ್ ಮಾರ್ಗಸೂಚಿಯನ್ನು ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರೂ ಅನುಸರಿಸಬೇಕು. ಅಷ್ಟೇ ಅಲ್ಲದೇ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ.

ಸಿಇಟಿ ಪರೀಕ್ಷಾ ವೇಳಾಪಟ್ಟಿ:

16-6-22ರಂದು 10.30 ರಿಂದ 11.30 – ಜೀವಶಾಸ್ತ್ರ

16-6-22 ರಂದು 2.30 ರಿಂದ 3.30- ಗಣಿತ

17-6-22ರಂದು 10.30 ರಿಂದ 11.30- ಭೌತಶಾಸ್ತ್ರ

17-6-22ರಂದ 2.30 ರಿಂದ 3.30-ರಸಾಯನಶಾಸ್ತ್ರ

18-6-22ರಂದು-10.30 ರಿಂದ 11.30-ಹೊರನಾಡ ಕನ್ನಡಿಗರಿಗೆ, ಕನ್ನಡ ಪರೀಕ್ಷೆ