ಇಂದಿನಿಂದ 2 ದಿನ ರಾಷ್ಟ್ರವ್ಯಾಪಿ ಕಾರ್ಮಿಕರ ಮುಷ್ಕರ ; ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ…

76
firstsuddi

ನವದೆಹಲಿ : ದೇಶಾದ್ಯಂತ ಇಂದು ಮತ್ತು ನಾಳೆ ವಿವಿಧ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಕಾರ್ಮಿಕ ಸಂಘಟನೆಗಳ ಮುಷ್ಕರದಿಂದಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಸರ್ಕಾರದ ಜನ ವಿರೋಧಿ ಆರ್ಥಿಕ ನೀತಿಗಳು ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ವಿವಿಧ ಪ್ರದೇಶಗಳ ಸ್ವತಂತ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದೆ.

ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ, ಬ್ಯಾಂಕ್ ಗಳು, ವಿಮೆ ಮುಂತಾದ ವಲಯಗಳ ಒಕ್ಕೂಟಗಳು ಮುಷ್ಕರ ನಡೆಸಲು ತಮ್ಮ ಕಾರ್ಮಿಕರಿಗೆ ಸೂಚನೆ ನೀಡಿವೆ. ರೈಲ್ವೆ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ನೂರಾರು ಸ್ಥಳಗಳಲ್ಲಿ ಮುಷ್ಕರವನ್ನು ಬೆಂಬಲಿಸಲು ಮುಂದಾಗಿವೆ. ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ಮುಷ್ಕರಕ್ಕೆ ಕರೆ ನೀಡಿವೆ.

ಆರ್ ಬಿಎಲ್ ಸೇರಿದಂತೆ ಕೆಲ ಖಾಸಗಿ ಬ್ಯಾಂಕ್ ಗಳ ನೌಕರ ಸಂಘಟನೆಗಳೂ ಈ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಶಾಖೆಗಳ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಆದರೂ ವಹಿವಾಟು ಸುಸೂತ್ರವಾಗಿ ನಡೆಯುವುದು ಕಷ್ಟವಾಗಬಹುದು ಎಂದು ಎಸ್ ಬಿಐ, ಕೆನರಾ ಬ್ಯಾಂಕ್, ಪಿಎನ್ ಬಿ ಸೇರಿದಂತೆ ಹಲವು ಬ್ಯಾಂಕ್ ಗಳು ತಿಳಿಸಿವೆ.