ಇಂದು ಆಷಾಢ ಅಮವಾಸ್ಯೆ ; ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ…

86
firstsuddi

ಮೈಸೂರು : ಇಂದು ಆಷಾಢ ಶುಕ್ರವಾರ ಹಾಗೂ ಅಮವಾಸ್ಯೆ. ಈ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಜಿಲ್ಲೆಯ ಚಾಮುಂಡಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಶಿಷ್ಟಾಚಾರ ವ್ಯಾಪ್ತಿಯ ಜನಪ್ರತಿನಿಧಿಗಳಿಗೆ, ಕರ್ತವ್ಯ ನಿರತ ಅಧಿಕಾರಿಗಳಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶ ಅವಕಾಶವಿದೆ. ನಾಳೆ, ನಾಡಿದ್ದು ವಾರಾಂತ್ಯವಾಗಿರುವುದರಿಂದ ಸೋಮವಾರದವರೆಗೆ ನಿರ್ಬಂಧ ಮುಂದುವರಿಸಲಾಗಿದೆ. ಉಳಿದಂತೆ ರಾಜ್ಯದ ಉಳಿದ ದೇವಸ್ಥಾನಗಳಲ್ಲಿ ಭಕ್ತರು ಬೆಳಗ್ಗೆಯೇ ದೇವಸ್ಥಾನಗಳಿಗೆ ಬರುತ್ತಿದ್ದು, ದೇವರ ದರ್ಶನ ಪಡೆಯುತ್ತಿದ್ದಾರೆ.