ಇಂದು ಏಳು ಕೋವಿಡ್ ಲಸಿಕೆ ತಯಾರಕ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿರುವ ಮೋದಿ.

81
firstsuddi

ನವದೆಹಲಿ : 100 ಕೋಟಿ ಲಸಿಕೆ ನೀಡುವ ಮೂಲಕ ಭಾರತ ಮೈಲಿಗಲ್ಲು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಳು ಭಾರತೀಯ ಕೋವಿಡ್ ಲಸಿಕೆ ತಯಾರಕ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ.

ಸೀರಮ್ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್, ಡಾ ರೆಡ್ಡಿ ಲ್ಯಾಬೋರೇಟರೀಸ್, ಝೈಡಸ್ ಕ್ಯಾಡಿಲಾ, ಬಯೋಲಾಜಿಕಲ್ ಇ, ಗೆನ್ನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯಾ ಬಯೋಟೆಕ್ – ಈ ಏಳು ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಅವರು ಸಭೆ ನಡೆಸಲಿದ್ದಾರೆ.

ಭಾರತದಲ್ಲಿ ಶೇ.31ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ. ಉಳಿದ ಶೇ.75ಮಂದಿ ಇನ್ನೂ ಒಂದು ಡೋಸ್ ಮಾತ್ರ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಾದ ಉಳಿದ ಜನರಿಗೆ ಸಾಧ್ಯವಾದಷ್ಟು ಬೇಗ ಲಸಿಕೆ ಹಾಕುವ ವಿಧಾನಗಳ ಬಗ್ಗೆ ನರೇಂದ್ರ ಮೋದಿ ಈ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.