ಇಂದು ಒಂದೇ ದಿನ 12 ಮಂದಿಗೆ ಕೊರೊನಾ ಸೋಂಕು ದೃಢ-175ಕ್ಕೆ ಏರಿದ ಸೋಂಕಿತರ ಸಂಖ್ಯೆ…

147
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 12 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ತೆರಳಿದವರು ಚಿಕಿತ್ಸೆ ಪಡೆದುಕೊಳ್ಳದೆ ನಿರ್ಲಕ್ಷ ವಹಿಸುತ್ತಿರುವುದರಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಜಾಮುದ್ದೀನ್ ಕಾರ್ಯಕ್ರಮಕ್ಕೆ ತೆರಳಿದ್ದ ನಾಲ್ವರಲ್ಲಿ ಸೋಂಕು ದೃಢವಾಗಿದೆ. ಅಲ್ಲದೇ ಅವರ ಸಂಪರ್ಕಕ್ಕೆ ಬಂದವರಲ್ಲಿಯೂ ಕೊರೊನಾ ದೃಢವಾಗಿದ್ದು, ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ.