ಬೆಂಗಳೂರು : ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೋವಿಡ್ ವ್ಯಾಕ್ಸಿನೇಷನ್ ಮುಂದುವರೆದಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೋವಿಡ್ ಲಸಿಕೆ ಪಡೆಯಲಿದ್ದಾರೆ.
60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ಹಾಕುವ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನಕ್ಕೆ ಚಾಲನೆ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ರಾಜ್ಯದ ಅನೇಕ ಸಚಿವರು ಲಸಿಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಸಂಜೆ 4 ಗಂಟೆ ಸುಮಾರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ.










