ಇಂದು ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ…

80
firstsuddi

ಮುಂಬೈ: ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಎನ್ಸಿಬಿ ಬಲೆಗೆ ಬಿದ್ದಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಮುಂಬೈ ಎನ್ ಡಿಪಿಎಸ್ ನ್ಯಾಯಾಲಯದಿಂದ ಆರ್ಯನ್ ಖಾನ್ ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದರಿಂದ ಬಾಂಬೆ ಹೈಕೋರ್ಟ್ ನಲ್ಲಿ ಆರ್ಯನ್ ಪರ ವಕೀಲರು ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಅದರ ವಿಚಾರಣೆ ಇಂದು ನಡೆಯಲಿದ್ದು, ಇಂದು ಆರ್ಯನ್ ಖಾನ್ ಗೆ ಜಾಮೀನು ಸಿಗಬಹುದೇ ಅಥವಾ ಇನ್ನಷ್ಟು ದಿನ ಜೈಲುವಾಸ ಮುಂದುವರಿಯುವುದೇ ಎಂಬ ಕುತೂಹಲ ಮನೆಮಾಡಿದೆ.