ಇಂದು ನಡೆಯಬೇಕಿದ್ದ ಕೆಎಂಎಫ್ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರ…

256
firstsuddi

ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆಯಬೇಕಿದ್ದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‍ನ ಹೆಚ್.ಡಿ. ರೇವಣ್ಣ ಹಾಗೂ ಕಾಂಗ್ರೆಸ್ ಶಾಸಕ ಭೀಮಾ ನಾಯಕ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿತ್ತು. 12 ಮಂದಿ ನಿರ್ದೇಶಕರಿರುವ ಒಕ್ಕೂಟದಲ್ಲಿ ಜೆಡಿಎಸ್ ಬೆಂಬಲಿಗರ ಸಂಖ್ಯೆ 3ಮಂದಿ ನಿರ್ದೇಶಕರು ಮಾತ್ರ ಇದ್ದು, ಹೆಚ್.ಡಿ. ರೇವಣ್ಣ ಅವರು ನಾಲ್ಕು ಮಂದಿ ನಿರ್ದೇಶಕರನ್ನು ಹೈಜಾಕ್ ಮಾಡಿ ರೆಸಾರ್ಟ್‍ನಲ್ಲಿ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ನಿಖರ ಮಾಹಿತಿಯನ್ನು ಪಡೆದ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡಿದ್ದು, ಮುಂದಿನ ದಿನಗಳಲ್ಲಿ ಚುನಾವಣಾ ದಿನಾಂಕವನ್ನು ನಿಗಧಿಪಡಿಸುವುದಾಗಿ ತಿಳಿಸಿದೆ.