ಇಂದು ಬಂದ್‍ಗೆ ಕರೆ ನೀಡಿದ ಮಂಡ್ಯ ರೈತರು…

64
firstsuddi

ಮಂಡ್ಯ : ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಹಲವು ದಿನಗಳಿಂದ ನಡೆಸುತ್ತಿರುವ
ಪ್ರತಿಭಟನೆಯನ್ನು ಕೈಬಿಡದ ರೈತರು ಇಂದು ಮಂಡ್ಯ ಬಂದ್ ಗೆ ಕೆರೆ ನೀಡಿದ್ದಾರೆ.

ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ ಹಾಗೂ ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅನ್ನದಾತರು ಸಜ್ಜಾಗಿದ್ದಾರೆ.

ಮಂಡ್ಯ ಬಂದ್ ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಮಂಡ್ಯ ನಗರದ ಅಂಗಡಿ ಮುಗ್ಗಟುಗಳು ಬಂದ್ ಆಗಿದ್ದು, ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲು ಪ್ಲಾನ್ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಸಕ್ಕರೆನಾಡು ಮಂಡ್ಯದಲ್ಲಿ ಬಂದ್ ಇರಲಿದೆ.