ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ…

86
firstsuddi

ನವದೆಹಲಿ : ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ ಇ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ಈ ವರ್ಷ ಕೊರೊನಾ ಕಾರಣದಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗಲಿಲ್ಲ. ಆದರೆ, ಎಸ್ ಎಸ್ ಎಲ್ ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ 12ನೇ ತರಗತಿಯ ಫಲಿತಾಂಶ ನೀಡಲಿದ್ದೇವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಕೋನದಿಂದ ನ್ಯಾಯಯುತವಾಗಿ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಸಿಬಿಎಸ್ಇ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಮಡೆಯಬಹುದಾಗಿದೆ.