ಇಂದು ಮೈಸೂರಿಗೆ ಆಗಮಿಸಲಿರುವ ಸೋನಿಯಾ ಗಾಂಧಿ.

75
firstsuddi

ಮೈಸೂರು : ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ.

ಸೋನಿಯಾ ಗಾಂಧಿ ಅವರು ಇಂದು ಮಧ್ಯಾಹ್ನ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ. ಪೂಜೆಯ ನಂತರ ಸೋನಿಯಾ ಗಾಂಧಿ ಮಡಿಕೇರಿಗೆ ತೆರಳಲಿದ್ದಾರೆ. ಸಂಜೆ ವೇಳೆಗೆ ರಾಹುಲ್ ಗಾಂಧಿ ಕೂಡ ಮಡಿಕೇರಿಗೆ ಹೋಗುತ್ತಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಸ್ಪರ್ಧಿಸಿದ್ದು, ಈ ಹಿನ್ನೆಲೆಯಲ್ಲಿ ಆ ಕುರಿತ ಮಹತ್ವದ ಚರ್ಚೆ ಮಡಿಕೇರಿಯ ರೆಸಾರ್ಟ್ ನಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ.

ಅಕ್ಟೋಬರ್ 6 ರಂದು ಮಂಡ್ಯ ಜಿಲ್ಲೆಯ ಮಹದೇಶ್ವರಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಗಲಿದೆ. ಈ ಯಾತ್ರೆಯಲ್ಲಿ ರಾಹುಲ್, ಸೋನಿಯಾ ಭಾಗಿಯಾಗಲಿದ್ದಾರೆ. ಅಕ್ಟೋಬರ್ 7 ರಂದು ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು ಸಹೋದರ ರಾಹುಲ್ ಜೊತೆಗೆ ನಾಗಮಂಗಲದಲ್ಲಿ ಹೆಜ್ಜೆ ಹಾಕಲಿದ್ದಾರೆ.