ಬೆಂಗಳೂರು: ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಬೆಳಗ್ಗೆ 8:20ಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೋದಿ 10:20ಕ್ಕೆ ಬೀದರ್ ಏರಬೇಸ್ಗೆ ಆಗಮಿಸಲಿದ್ದಾರೆ. 10:25ಕ್ಕೆ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್ಗೆ ತೆರಳಿದ್ದಾರೆ. ಬೆಳಗ್ಗೆ 11ಕ್ಕೆ ಬೃಹತ್ ಬಹಿರಂಗ ಸಮಾವೇಶದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ನಂತರ ಹುಮ್ನಾಬಾದ್ನಿಂದ ವಿಜಯಪುರಕ್ಕೆ ತೆರಳಲಿದ್ದಾರೆ.
ವಿಜಯಪುರ ನಗರದ ಸೈನಿಕ್ ಶಾಲೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗಿ ಆಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಕ್ಷೇತ್ರಗಳಿದ್ದು, ಅದರಲ್ಲಿ ಬಹುತೇಕ ಧರ್ಮ ಆಧಾರಿತ ಚುನಾವಣೆ ನಡೆಯಲಿದೆ.
ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 2:45 ಕ್ಕೆ ಯಬರಟ್ಟಿಗೆ ಆಗಮಿಸಿ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಯಬರಟ್ಟಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಮೋದಿ ಆಗಮಿಸಿ ಅಲ್ಲಿಂದ ಹೊರಟು ಸಂಜೆ 5.30ಕ್ಕೆ ಬೆಂಗಳೂರಿನ ಹೆಚ್ಎಎಲ್ಗೆ ಪ್ರಧಾನಿ ಆಗಮಿಸಲಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ ಬೇಟೆ ನಡೆಸಲಿರುವ ಮೋದಿ, ಮಾಗಡಿ ನೈಸ್ ರೋಡ್ನ ಜಂಕ್ಷನ್ನಿಂದ ಸುಮನಹಳ್ಳಿ ಜಂಕ್ಷನ್ವರೆಗೆ ರೋಡ್ ಶೋ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಕೋಲಾರ, ಹಾಸನ, ರಾಮನಗರ, ಮೈಸೂರಿನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ.










