ಇಂದು ರಾಜ್ಯದಲ್ಲಿ ಕೊರೊನಾ ವೈರಸ್‍ಗೆ ಮತ್ತೊಂದು ಬಲಿ-ಸಾವಿನ ಸಂಖ್ಯೆ 13ಕ್ಕೆ ಏರಿಕೆ…

144
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್‍ಗೆ ಇಂದು ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮೃತ ವ್ಯಕ್ತಿಗೆ ಸೋಂಕು ತಗುಲಿರುವದು ದೃಢವಾದ ಬಳಿಕ ನಗರದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದು, ಇನ್ನು ಮೃತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಬಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್‍ನಲ್ಲಿ ಮಾಹಿತಿ ತಿಳಿಯಬೇಕಿದೆ