ಇಂದು ಸಂಜೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ…

140
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಪ್ರಮಾಣದಲ್ಲಿ ತಗ್ಗಿರುವ ಬೆನ್ನಲ್ಲೇ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಕುರಿತು ಸ್ವತಃ ಪ್ರಧಾನಿ ಮೋದಿ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಇಂದು ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವನ್ನು ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆಯಾಗಿದ್ದು, ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ತಿಳಿಸಲಿದ್ದಾರೆ ಎನ್ನಲಾಗಿದೆ.