ಇಂದು ಸಂಜೆ 4 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ…

104
firstsuddi

ಬೆಂಗಳೂರು : ಆಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಲಿದೆ.

ಫಲಿತಾಂಶವು ಇಂದು ಸಂಜೆ 4 ಗಂಟೆಯ ನಂತರ ಪ್ರಕಟವಾಗಲಿದ್ದು,https://cetonline.karnataka.gov.in/kea/ ಈ ಲಿಂಕ್ ನಲ್ಲಿ ಲಭ್ಯವಿರಲಿದೆ. ಒಟ್ಟು 2,01,834 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿದ್ದರು. 

ಈ ಬಾರಿ ಕೋವಿಡ್ ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ರದ್ದು ಮಾಡಲಾಗಿತ್ತು. ಎಲ್ಲರನ್ನೂ ಉತ್ತೀರ್ಣರನ್ನಾಗಿ ಮಾಡಿದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಜೊತೆಗೆ ವೃತ್ತಿಪರ ಕೋರ್ಸಿಗೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಪರಿಗಣಿಸುವ ತೀರ್ಮಾನವನ್ನು ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ.