ಇಂದೂ ಸಿಗಲಿಲ್ಲ ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ-ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆ…

163
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದೂ ಕೂಡಾ ಜಾಮೀನು ಕೈತಪ್ಪಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿಕೆ ಮಾಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆ ನಡೆಯುತ್ತಲೇ ಇದ್ದು, ಪ್ರಕರಣ ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ್ದಾರೆ. ಈ ಹಿನ್ನೆಲೆ ವಿಶೇಷ ನ್ಯಾಯಾಲಯ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.16ಕ್ಕೆ ಮುಂದೂಡಿಕೆ ಮಾಡಿದೆ.