ಮೂಡಿಗೆರೆ : ಬಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಇಂಪಾ ಜೆ.ಎಂ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಶ್ಲಾಘನೀಯ ಸೇವೆಯನ್ನು ಗುರುತಿಸಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇವರು ಜಾಣಿಗೆ ಗ್ರಾಮದ ಮಂಜುನಾಥ್ ಜೆ.ಟಿ ಹಾಗೂ ಜಯಲಕ್ಷ್ಮೀ ಪುತ್ರಿಯಾಗಿದ್ದು, ಕಳೆದ 15 ವರ್ಷದಿಂದ ಬಾನಹಳ್ಳಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.










