ಇಟಲಿಯಲ್ಲಿ ಕೊರೊನಾ ಅಟ್ಟಹಾಸ-ನಿನ್ನೆ ಒಂದೇ ದಿನ 1000 ಮಂದಿ ಕೊರೊನಾಗೆ ಬಲಿ…

441
firstsuddi

ರೋಮ್ : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಇಟಲಿಯಲ್ಲಿ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 1000 ಮಂದಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಬಲಿಯಾಗಿದ್ದು, 87 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಚೀನಾದಿಂದ ಆರಂಭವಾದ ಈ ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವದಾಧ್ಯಂತ ವ್ಯಾಪಿಸಿ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದು, ಇಟಲಿಯಲ್ಲಿ ಈವರೆಗೆ ಕೊರೊನಾ ಸೋಂಕಿಗೆ 9 ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 87 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಅಲ್ಲದೇ 10,950 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.