ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ತೆಗೆಯುವಂತಿಲ್ಲ…

57
firstsuddi

ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೆ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ವಿವಿಧ ಕಾರ್ಯಗಳ ನಿಮಿತ್ತ ಆಗಮಿಸುತ್ತಾರೆ. ಆದರೆ ಹೀಗೆ ಸರ್ಕಾರಿ ಕಚೇರಿಗಳಿಗೆ ಆಗಮಿಸಿದ ಸಂದರ್ಭಗಳಲ್ಲಿ ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋಗಳನ್ನು ತೆಗೆದುಕೊಂಡು ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಈ ನಡೆಯಿಂದ ಸರ್ಕಾರಿ ಕಚೇರಿಗಳ, ಸರ್ಕಾರ ಘನತೆಗೆ ಕುಂದು ಉಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯ ನೌಕರರ ಸಂಘ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ತೆಗೆಯುದಕ್ಕೆ ನಿಷೇಧ ಹೇರಬೇಕು ಎಂದು ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಸರ್ಕಾರ, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವಿಡಿಯೋ ತೆಗೆಯುವುದನ್ನು ನಿಷೇಧಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.