ಇನ್ನು ಮುಂದೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ

68

ಬೆಂಗಳೂರು: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಗರದ ಕೆಲವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಇದರನುಸಾರ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ರಾಷ್ಟ್ರಗೀತೆ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.