ನವದೆಹಲಿ : ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ಅವರು ರಾಜೀನಾಮೆ ನೀಡಿದ್ದಾರೆ.
ಇನ್ಫೋಸಿಸ್ ಸಂಸ್ಥೆಯೂ ಸಹ ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದು, ಜೋಶಿ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 1 ರಿಂದ ಅವರು ರಜೆಯಲ್ಲಿರಲಿದ್ದಾರೆ. ಜೂನ್ 9ಕ್ಕೆ ಅವರು ಸಂಸ್ಥೆಯಿಂದ ಹೊರನಡೆಯಲಿದ್ದಾರೆ ಎಂದು ನಿರ್ದೇಶಕರ ಮಂಡಳಿ ತಿಳಿಸಿದೆ.
ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ ಇದೀಗ ಟೆಕ್ ಮಹೀಂದ್ರಾದಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಟೆಕ್ ಮಹೀಂದ್ರಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಸಿಪಿ ಗುರ್ನಾನಿ ಅವರು ಡಿಸೆಂಬರ್ 19 ನಿವೃತ್ತರಾಗಲಿದ್ದು, ಅವರ ಸ್ಥಾನಕ್ಕೆ ಮೋಹಿತ್ ಜೋಶಿ ಅವರು ನೇಮಕಗೊಳ್ಳಲಿದ್ದಾರೆ.
2000 ಇಸವಿಯಲ್ಲಿ ಇನ್ಫೋಸಿಸ್ ಗೆ ಸೇರಿದ್ದ ಜೋಶಿ ನಂತರ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿ ತಮ್ಮ ಸಾಮರ್ಥ್ಯ ತೋರಿದ್ದರು. ಅಲ್ಲದೇ ಯುರೋಪ್ ನಲ್ಲಿ ಹಣಕಾಸು ಸೇವೆಗಳ ವ್ಯವಹಾರ ಮುನ್ನಡೆಸುವ ಜವಾಬ್ದಾರಿ ಹೊಂದಿದ್ದರು.










