ಬೆಂಗಳೂರು : ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಲಾಗಿದೆ ಎಂಬ ಆರೋಪದ ಅಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರಿಸ್ನಲ್ಲಿ ಬರುವ ಸನ್ನಿವೇಶಗಳನ್ನು ಬದಲಾಯಿಸಿ ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ, ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ಅವರು ಪ್ರಕರಣ ದಾಖಲಿಸಿದ್ದಾರೆ.










