ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ಸರ್ಕಾರ ಅಧಿಕೃತ ಆದೇಶ…

38
firstsuddi

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.