ಇನ್ಮುಂದೆ ಮಹಾರಾಷ್ಟ್ರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಎಂಟು ಗಂಟೆ ಮಾತ್ರ ಕೆಲಸ…

73
firstsuddi

ಮುಂಬೈ : ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ ಇನ್ಮುಂದೆ ಅವರು ಎಂಟು ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಂಜಯ್ ಪಾಂಡೆ ಅವರು, ಮಹಿಳಾ ಪೊಲೀಸ್ ಸಿಬ್ಬಂದಿ ಕೆಲಸವನ್ನು ಕಡಿಮೆ ಮಾಡುವ ಸಲುವಾಗಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ಮಹಿಳೆಯರು ಇನ್ಮುಂದೆ 8 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸಬಹುದು ಎಂದು ತಿಳಿಸಿದ್ದಾರೆ.

ಕುಟುಂಬ ಹಾಗೂ ಕರ್ತವ್ಯದ ನಡುವೆ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ಮುಂದೆ 12 ಗಂಟೆಗಳ ಬದಲು ದಿನದ 8 ಗಂಟೆಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಲಿದ್ದಾರೆ.