ಬೆಂಗಳೂರು: 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗೋ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ. ಜೊತೆಗೆ ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.
ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್ ಮಾಡಲು ಟ್ರಾಫಿಕ್ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.










