ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ 11.45 ಕೋಟಿ ರೂ. ಚಾರ್ಜ್ ಮಾಡುತ್ತಾರೆ ಎಂಬ ಸುದ್ದಿ ನಿನ್ನೆಯಿಂದ ಸಾಕಷ್ಟು ಸದ್ದು ಮಾಡಿತ್ತು. ಆದರೆ ಇದೀಗ ಈ ಸುದ್ದಿಯನ್ನು ಅಲ್ಲಗಳೆದಿರುವ ವಿರಾಟ್ ಕೊಹ್ಲಿ, ಈ ಮಾಹಿತಿ ಶುದ್ಧ ಸುಳ್ಳು ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಹಾಗೂ ಲಿಯೊನೆಲ್ ಮೆಸ್ಸಿ ಬಳಿಕ ವಿಶ್ವದಲ್ಲಿಯೇ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ 3ನೇ ಕ್ರೀಡಾಪಟು ಹಾಗೂ ನಂ.1 ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಎಂದು ಸಂಸ್ಥೆ ತಿಳಿಸಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿತ್ತು. ಇದಕ್ಕೆ ಸ್ವತಃ ವಿರಾಟ್ ಕೊಹ್ಲಿ ಅವರೇ ಸ್ಪಷ್ಟನೆ ಕೊಟ್ಟಿದ್ದು, ತಾನು ಒಂದು ಇನ್ಸ್ಟಾಗ್ರಾಮ್ ಪೋಸ್ಟ್ಗೆ 11.45 ಕೋಟಿ ರೂ. ಪಡೆಯುತ್ತೇನೆಂಬುದು ಸುಳ್ಳು ಎಂದು ಹೇಳಿದ್ದಾರೆ.
ನಾನು ನನ್ನ ಜೀವನದಲ್ಲಿ ಸ್ವೀಕರಿಸಿದ ಎಲ್ಲದಕ್ಕೂ ನಾನು ಕೃತಜ್ಞನಾಗಿದ್ದೇನೆ ಮತ್ತು ಋಣಿಯಾಗಿದ್ದೇನೆ, ನನ್ನ ಸೋಶಿಯಲ್ ಮೀಡಿಯಾ ಗಳಿಕೆಯ ಬಗ್ಗೆ ಹರಿದಾಡುತ್ತಿರುವ ಸುದ್ದಿ ನಿಜವಲ್ಲ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.










