ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು…

120
firstsuddi

ಶ್ರೀನಗರ : ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಬುಡ್ಗಾಮ್ ಜಿಲ್ಲೆಯ ಚಾದೂರಾ ಪ್ರದೇಶದ ಮೋಚ್ವಾದಲ್ಲಿ ಕೆಲವು ಉಗ್ರರು ಅಡಗಿರುವ ಮಾಹಿತಿ ತಿಳಿದ ಯೋಧರು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದು, ಘಟನಾ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ.