ಇಬ್ಬರು ಕುಖ್ಯಾತ ಬೈಕ್ ಕಳ್ಳರ ಬಂಧನ ; 16 ಬೈಕ್ ವಶಕ್ಕೆ…

104
firstsuddi

ಕಲಬುರಗಿ : ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಲ್ಲಿಕಾರ್ಜುನ ಕೋರಿ(21), ಪ್ರಸಾದ್ ಬಿದನೂರ್( 22) ಬಂಧಿತ ಆರೋಪಿಗಳು. ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡಿ ಹಳ್ಳಿಗಳಲ್ಲಿ ಮಾರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ನಗರದ ಸ್ಟೇಷನ್ ಬಜಾರ್ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 16 ವಿವಿಧ ಕಂಪನಿಯ ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.