ಇಬ್ಬರು ಮಕ್ಕಳಿಗೆ ನೇಣು ಬಿಗಿದು ಕೊಂದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣು…

124
firstsuddi

ಮಂಡ್ಯ : ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ತನ್ನ ಮಕ್ಕಳಾದ ಉಲ್ಲಾಸ್(4) ಹಾಗೂ ಗಾನವಿ(6)ಗೆ ನೇಣು ಬಿಗಿದು ಹತ್ಯೆ ಮಾಡಿ ಬಳಿಕ ತಾಯಿ ನಿವೇದಿತಾ(26) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ನಿವೇದಿತಾ ಕಳೆದ 7 ವರ್ಷಗಳ ಹಿಂದೆ ಗ್ರಾಮದ ಕೃಷ್ಣೇಗೌಡ ಎಂಬುವವರನ್ನು ವಿವಾಹವಾಗಿದ್ದರು. ಇಬ್ಬರು ಅನ್ಯೂನ್ಯವಾಗಿ ಸಂಸಾರ ನಡೆಸುತ್ತಿದ್ದು, ಇಬ್ಬರ ನಡುವೆ ಯಾವುದೇ ಮನಸ್ಥಾಪಗಳು ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಆದರೆ ಯಾವ ಕಾರಣಕ್ಕೆ ನಿವೇದಿತಾ ಅವರು ತನ್ನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.