ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿ ಆತ್ಮಹತ್ಯೆಗೆ ಶರಣು…

118
firstsuddi

ಹೊಸಪೇಟೆ : ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ದಂಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂಜುಂಡೇಶ್ವರ (32), ಪಾರ್ವತಿ (30), ಗೌತಮಿ (3) ಹಾಗೂ ಸ್ವರೂಪ್ (2) ಎಂದು ಗುರುತಿಸಲಾಗಿದೆ. ಜಿಂದಾಲ್ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಂಜುಂಡೇಶ್ವರ ಅವರು ಬಹಳ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಈ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದಂಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಮ್ಮ ಸಾವಿಗೆ ಯಾರೂ ಕಾರಣರಲ್ಲ, ನಾವೇ ಸ್ವಯಂಪ್ರೇರಣೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೆತ್‍ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.