ಈ ಬಾರಿ ಯಾವುದೇ ರೀತಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಇಲ್ಲ : ಸಿಎಂ ಸ್ಪಷ್ಟನೆ…

142
Firstsuddi

ಬೆಂಗಳೂರು : ಈ ಬಾರಿ ಯಾವುದೇ ರೀತಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಇಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ಸ್ಪಷ್ಟ ಪಡಿಸಿದ್ದಾರೆ.

ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ನಮ್ಮ ರಾಜ್ಯ ಇಡೀ ದೇಶದಲ್ಲೇ ಸೋಂಕು ಪ್ರಕರಣ ಹೆಚ್ಚಿಗೆ ಹೊಂದಿದೆ. ಹಾಗಾಗಿ, ಜನರು ಮಾಸ್ಕ್ ಹಾಕಿ, ಅಂತರ ಕಾಯ್ದುಕೊಳ್ಳಬೇಕು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಓಡಾಡಬೇಕು. ಪೊಲೀಸರಿಗೆ ಲಾಠಿ ಬೀಸಲು, ವಾಹನ ಸೀಜ್ ಮಾಡಲು ಅವಕಾಶ ನೀಡಬಾರದು. ಜನರ ಸಹಕಾರ ಇದ್ದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯ ಎಂದು ಮನವಿ ಮಾಡಿದರು.

ಇನ್ನೂ ಇದೇ ವೇಳೆ ದೆಹಲಿಗೆ ಭೇಟಿ ಕೊಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ನಾನೇಕೆ ದೆಹಲಿಗೆ ಹೋಗಲಿ? ಮೊನ್ನೆಯಷ್ಟೇ ಸಚಿವ ಬಸವರಾಜ್ ಬೊಮ್ಮಾಯಿ‌ ಹೋಗಿ ಬಂದಿದ್ದಾರೆ. ರಾಜ್ಯಕ್ಕೆ ಬೇಕಾದ ಸಹಕಾರ ಕೇಳಿ ಬಂದಿದ್ದಾರೆ.ನಾನು ಕೇಂದ್ರ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಜೆಮ್ ಶೆಡ್ ಪುರದಿಂದ ಆಕ್ಸಿಜನ್ ಬಂದಿದೆ. ಸ್ವತಃ ಪ್ರಧಾನಿಯವರೇ ನನ್ನ ಜೊತೆ ಮಾತನಾಡಿದ್ದಾರೆ. ಕೇಂದ್ರದಿಂದ ಎಲ್ಲ ಸಹಕಾರ ಕೊಡುತ್ತಿದ್ದಾರೆ ಎಂದರು.