ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ವೆಬ್ ಪೋರ್ಟಲ್ ಪ್ರಾರಂಭ…

106
firstsuddi

ವಾಷಿಂಗ್ಟನ್ : ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. http://ukraine.karnataka.tech ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ.

 

ಉಕ್ರೇನ್ ನಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇಲೆ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ 281 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆ ಮಾಹಿತಿಯನ್ನು ನಾವು ಕೇಂದ್ರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.

ಈ ವೆಬ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಮಾಹಿತಿ ಕೊಡಬಹುದು. ವಿದ್ಯಾರ್ಥಿಗಳು ಮಾಹಿತಿ ಅಪ್ ಲೋಟ್ ಮಾಡಬೇಕು. ಮೊಬೈಲ್ ಆಪ್ ನಲ್ಲಿ ಮಾಹಿತಿ ಕೊಟ್ಟ ಬಳಿಕ ಅವರ ಮಾಹಿತಿ ಕೇಂದ್ರ ಸರ್ಕಾರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೆ ಕೊಡುತ್ತೇವೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ನಾವು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ವೆಬ್ ಪೋರ್ಟ್ ನಲ್ಲಿ ಸರಳವಾಗಿ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.