ಉಕ್ರೇನ್‍ನಲ್ಲಿ ಯುದ್ಧ ಭೀತಿ : ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್‍ನತ್ತ ಹೊರಟ ಏರ್ ಇಂಡಿಯಾ ವಿಮಾನ.

76
firstsuddi

ನವದೆಹಲಿ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುವ ಭೀತಿ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಏರ್ ಇಂಡಿಯಾ ವಿಮಾನ ಇಂದು ರಾತ್ರಿ ಉಕ್ರೇನ್ ತಲುಪಲಿದೆ.

ಉಕ್ರೇನ್ ತೊರೆಯಲು ಇಚ್ಚಿಸಿ ನೋಂದಾಯಿಸಿಕೊಂಡಿದ್ದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಟಾಟಾ ಒಡೆತನದ ಏರ್ ಇಂಡಿಯಾದ ಮೂರು ವಿಮಾನಗಳು ಕಾರ್ಯಾಚರಣೆಯಲ್ಲಿವೆ. ಏರ್ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ ತವರು ದೇಶಕ್ಕೆ ಮರಳಲಿದ್ದಾರೆ ಎಂದು ಏರ್ ಲೈನ್ ಮೂಲಗಳು ತಿಳಿಸಿವೆ.

ಏರ್ ಇಂಡಿಯಾದ ಮೂರು ವಿಮಾನಗಳು ಫೆ.22, 24 ಮತ್ತು 26ರಂದು ಭಾರತ ಮತ್ತು ಉಕ್ರೇನ್ ನಡುವೆ ಕಾರ್ಯಾಚರಣೆ ನಡೆಸಲಿದೆ. ಉಕ್ರೇನ್ ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್ ಡ್ರೀಮ್ ಲೈನರ್ ಎಐ-1947 ವಿಮಾನವು ಟೇಕ್ ಆಫ್ ಆಗಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿದುಬಂದಿದೆ.