ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – 8 ಜನರು ಸಾವು…

46
firstsuddi

ಕೀವ್ : ಕಳೆದೊಂದು ವರ್ಷದಿಂದ ಉಕ್ರೇನ್ ಮೇಲೆ ದಾಳಿ ನಡೆಸುತ್ತಲೇ ಇರುವ ರಷ್ಯಾ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದೆ. ಪೂರ್ವ ಉಕ್ರೇನ್ ನಗರದ ಸ್ಲೋವಿಯನ್ಸ್ಕ್‌ನಲ್ಲಿರುವ ವಸತಿ ಕಟ್ಟಡದ ಮೇಲೆ ನಿನ್ನೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆ 8 ಜನರು ಸಾವನ್ನಪ್ಪಿದ್ದು, 21 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಗರದ ಮೇಲೆ ಏಳು ಕ್ಷಿಪಣಿಗಳನ್ನು ಹಾರಿಸಲಾಗಿದ್ದು, S-300 ಕ್ಷಿಪಣಿಗಳು, 10 ಅಪಾರ್ಟ್ಮೆಂಟ್ ಕಟ್ಟಡಗಳು ಹಾಗೂ ಇತರೆ ಸೈಟ್ ಗಳನ್ನು ಧ್ವಂಸ ಮಾಡಿವೆ. ಇದರಿಂದಾಗಿ ಕಟ್ಟಡಗಳ ಮಹಡಿಗಳು ಕುಸಿದಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಬದುಕುಳಿದವರಿಗಾಗಿ ರಕ್ಷಣಾ ತಂಡವು ಶೋಧ ನಡೆಸುತ್ತಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೇಶದಿಂದ ಪಲಾಯನ ಮಾಡುವುದನ್ನು ತಡೆಯುವ ಮಸೂದೆಗೆ ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ.

ಉಕ್ರೇನ್ ವಿರುದ್ಧ ಸೈನಿಕರನ್ನು ಸಜ್ಜುಗೊಳಿಸಲು ಅಧ್ಯಕ್ಷ ಪುಟಿನ್ ಆದೇಶಿಸಿದ ಬಳಿಕ ಕೆಲ ಯುವಕರು ದೇಶದಿಂದ ಕಾಲ್ಕಿತ್ತಿದ್ದರು. ಇದರಿಂದ ಸರ್ಕಾರ ಕಠಿಣ ನಿರ್ಧಾರಕ್ಕೆ ಬಂದಿದೆ. ಯುವ ಜನಾಂಗ ದೇಶ ಸೇವೆ ಮಾಡಲು ಕಾನೂನನ್ನೇ ಜಾರಿ ಮಾಡಿದೆ.