ಉಕ್ರೇನ್ ಮೇಲೆ ರಷ್ಯಾ ದಾಳಿ : ನಾಗರಿಕರು, ಸೇನಾ ಸಿಬ್ಬಂದಿ ಸೇರಿ 137 ಮಂದಿ ಸಾವು…

77
firstsuddi

ಕೀವ್ : ತನ್ನ ದೇಶದ ಮೇಲೆ ರಷ್ಯಾ ದಾಳಿ ಆರಂಭಿಸಿದಾಗಿನಿಂದ ಈವರೆಗೂ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ ವೀಡಿಯೋದಲ್ಲಿ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಉಕ್ರೇನ್ ಮಿಲಿಟರಿಯನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿ ಮಾಡಲಾಗುವುದು. ಅಲ್ಲಿನ ಜನತೆಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ರಷ್ಯಾ ಹೇಳಿತ್ತು. ಆದರೆ ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.