ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ-ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು…

155
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ, ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಭದ್ರತಾ ಪಡೆಗಳು ಅರಣ್ಯ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಭಾರತೀಯ ಯೋಧರತ್ತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಲ್ಲದೇ ಜಮ್ಮು ಕಾಶ್ಮೀರಾದ ಪೂಂಚ್ ಜಿಲ್ಲೆಯಲ್ಲಿ ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಮೂವರು ನಾಗರೀಕರು ಮೃತಪಟ್ಟಿದ್ದಾರೆ. ಪೂಂಚ್ ಜಿಲ್ಲೆಯ ಖರಿ ಕರ್ಮರಾ ಸೆಕ್ಟರ್ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕುಗ್ರಾಮಗಳ ಮೇಲೆ ಶೆಲ್ ದಾಲಿ ನಡೆಸಿದ್ದು, ಈ ವೇಲೆ ಗ್ರಾಮದ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಮನೆಯಲ್ಲಿದ್ದ ದಂಪತಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಶೆಲ್ ದಾಳಿಯಿಂದ ಕೆಲವು ಮನೆಗಳು ಹಾನಿಯಾಗಿದ್ದು, ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮೂಲಗಳಿಂದ ತಿಳೀದು ಬಂದಿದೆ.