ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ಮೂವರು ಉಗ್ರರ ಹತ್ಯೆ…

127
firstsuddi

ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ ನಡೆದಿದ್ದು, ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮ ಕಾಶ್ಮೀರಾದ ಲಾವೆಪೊರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನು ತಿಳಿದ ಯೋಧರು ನಿನ್ನೆ ಸಂಜೆಯಿಂದ ಕಾರ್ಯಾಚರಣೆ ಆರಂಭಿಸಿದ್ದರು. ಇಂದು ಬೆಳಗ್ಗೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಯೋಧರು ಕೂಡಲೇ ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.