ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಹುತಾತ್ಮ…

133
firstsuddi

ಶ್ರೀನಗರ : ಉಗ್ರರ ಗುಂಡಿನ ದಾಳಿಗೆ ಪೊಲೀಸ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್‍ನಾಗ್ ಜಿಲ್ಲೆಯ ಮೊಹಮ್ಮದ್ ಅಶ್ರಫ್ ಹುತಾತ್ಮ ಪೊಲೀಸ್ ಅಧಿಕಾರಿ. ಅಶ್ರಫ್ ಅವರು ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಉಗ್ರರು ಅಶ್ರಫ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಿಜ್‍ಬೆಹರಾ ಉಪ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲೇ ಹುತಾತ್ಮರಾಗಿದ್ದಾರೆ. ಕೂಡಲೇ ಘಟನಾ ಸ್ಥಳವನ್ನು ಪೊಲೀಸರು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದಲ್ಲದೇ ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಮೆಲ್ಹೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಯೋಧರು ಕಾರ್ಯಾಚರಣೆ ಆರಂಭಿಸಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.