ಉಡುಪಿ ಎಸ್ಪಿ ವಿಷ್ಣುವರ್ಧನ್ ಹಾಗೂ ಡಿವೈಎಸ್ಪಿ ಜೈ ಶಂಕರ್ ಅವರಿಗೆ ಮುಖ್ಯಮಂತ್ರಿಗಳ ಪದಕ…

174
firstsuddi

ಉಡುಪಿ : 2018ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿಯನ್ನು ರಾಜ್ಯ ಸರ್ಕಾರ ಸರ್ಕಾರ ಬಿಡುಗಡೆ ಮಾಡಿದ್ದು. ಇಂತಹ ಪದಕಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲಾ ಎಸ್ಪಿ ಹಾಗೂ ಉಡುಪಿ ಡಿವೈಎಸ್ಪಿ ಸೇರಿಂದತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಮುಖ್ಯಮಂತ್ರಿಗಳ ಪದಕಕ್ಕಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರತಿವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ಪಟ್ಟಿಯನ್ನು ಸರ್ಕಾರ ಇದೀಗ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಪದಕ ಪಟ್ಟಿಯನ್ನು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪ್ರಕಟಿಸಿದ್ದು, ಉಡುಪಿ ಜಿಲ್ಲಾ ಎಸ್ಪಿ ಎನ್ ವಿಷ್ಣುವರ್ಧನ್ ಹಾಗೂ ಉಡುಪಿ ಡಿವೈಎಸ್ಪಿ ಜೈಶಂಕರ್ ಅವರು ಕರ್ತವ್ಯದಲ್ಲಿ ಅತ್ಯುತ್ತಮ ಸಾಧನೆಗಾಗಿ ಈ ಬಾರಿಯ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.