ಉಡುಪಿ– ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜೆಪಿ ಹೆಗ್ಡೆ…

38
firstsuddi

ಉಡುಪಿ: ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಿದರು.

ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಹಾಗೂ ಪ್ರಮುಖರ ಸಭೆ ನಡೆದ ಬಳಿಕ ಪಕ್ಷದ ಪ್ರಮುಖರೊಂದಿಗೆ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.

ಈ ವೇಳೆ ಸಚಿವ ಕೆ ಜೆ ಜಾರ್ಜ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮೋಟಮ್ಮ. ಡಾ ಅಂಶುಮತ್ ಜೊತೆಗಿದ್ದರು.