ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಅವರು ಇಂದು ಅಧಿಕಾರ ವಹಿಸಿಕೊಂಡರು.
ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು.
ಅಧಿಕಾರ ವಹಿಸಿದ ಬಳಿಕ ಮಾತನಾಡಿದ ಡಾ.ಅರುಣ್ ಅವರು ಜಿಲ್ಲೆಯಲ್ಲಿ ಯಾವುದೇ ರೀತಿಯ ಅನೈತಿಕ ಪೊಲೀಸ್ ಗಿರಿಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.










