ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ…

297
firstsuddi

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜು.24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ  ಆದೇಶಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.