ಉಡುಪಿ ಜಿಲ್ಲೆಯಲ್ಲಿ ಮತ್ತೊಬ್ಬ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…

116
firstsuddi

ಉಡುಪಿ: ಕೊರೋನಾ ಮಹಾಮಾರಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಗೊಂಡಿದ್ದು ಒಟ್ಟು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬೈಂದೂರು ತಾಲೂಕಿನ ವಿದ್ಯಾರ್ಥಿನಿಗೆ ಜ್ವರ ಇದ್ದು ಆಕೆಯ ಗಂಟಲ ದ್ರವ ಪರೀಕ್ಷೆಯ ವೇಳೆ ಕೊರೋನಾ ಪಾಸಿಟಿವ್ ಇರುವುದು ದೃಢಗೊಂಡಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮಾಹಿತಿ ಮಾಹಿತಿ ನೀಡಿದ್ದಾರೆ.