ಉಡುಪಿ : ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು-ಇಬ್ಬರಿಗೆ ಗಂಭಿರ ಗಾಯ…

211
firstsuddi

ಉಡುಪಿ : ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು 6 ಮಂದಿ ಮಂಗಳೂರಿನಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಅಂಬಲಪಾಡಿ ಬಳಿ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಳಿದ 5 ಮಂದಿಯನ್ನು ಸ್ಥಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಉಡುಪಿ ನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.