ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕಚೇರಿಯ ಟ್ವಿಟರ್ ಖಾತೆ ಹ್ಯಾಕ್…

65
firstsuddi

ಲಖನೌ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಗಳು ಖಾತೆಯನ್ನು ಹ್ಯಾಕ್ ಮಾಡಿದ ತಕ್ಷಣ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡಿಪಿಯನ್ನು ತೆಗೆದುಹಾಕಿದ್ದು, ಕೆಲವೇ ಕ್ಷಣಗಳಲ್ಲಿ 100ಕ್ಕೂ ಹೆಚ್ಚು ಟ್ವೀಟ್ ಮಾಡಿದ್ದಾರೆ.

ಸುಮಾರು 4 ಗಂಟೆಗಳ ನಂತರ ಟ್ವಿಟರ್ ಖಾತೆಯ ಮೇಲೆ ಸಿಎಂ ಕಚೇರಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಹ್ಯಾಕರ್ ಗಳು ಹಾಕಿದ್ದ ಪೋಸ್ಟ್ ನ್ನು ಟ್ವೀಟ್ ಗಳನ್ನು ತೆಗೆದುಹಾಕಲಾಗಿದೆ. ಈಗ ಎಂದಿನಂತೆ ಸಿಎಂ ಕಚೇರಿಯ ಟ್ವಿಟರ್ ಕಾರ್ಯನಿರ್ವಹಿಸುತ್ತಿದೆ.

ಸರ್ಕಾರಿ ಕಚೇರಿಗಳ ಟ್ವಿಟರ್ ಖಾತೆಗಳು ಹ್ಯಾಕ್ ಆಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕರ್ ಗಳು ಹ್ಯಾಕ್ ಮಾಡಿದ್ದರು.