ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್(82) ಅವರು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.










