ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ಹಿರಿಯ ಪುತ್ರಿ ಐಶ್ವರ್ಯಾ ಅವರ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದ್ದು, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗ, ಉದ್ಯಮಿ ದಿವಂಗತ ಸಿದ್ದಾರ್ಥ್ ಹೆಗ್ಡೆ ಅವರ ಹಿರಿಯ ಪುತ್ರ ಅಮರ್ಥ್ಯ ಸುಬ್ರಹ್ಮಣ್ಯ ಹೆಗ್ಡೆ ಅವರೊಂದಿಗೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಮದುವೆ ಮಾತುಕತೆ ಬಹುತೇಕ ಮುಗಿದಿದ್ದು, ಇಬ್ಬರ ಮನೆಯವರು ಮನೆಗೆ ಹೋಗಿ ಬರುವ ಶಾಸ್ತ್ರವನ್ನು ಮುಗಿಸಿದ್ದು, ನಿಶ್ಚಿತಾರ್ಥ ದಿನಾಂಕ ಹಾಗೂ ಮದುವೆ ದಿನಾಂಕ ಇನ್ನಷ್ಟೆ ತಿಳಿಯಬೇಕಾಗಿದೆ.










